Judges 2:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಪೀಳಿಗೆಯವರೆಲ್ಲರು ಸತ್ತುಹೋದ ಮೇಲೆ ಮುಂದಿನ ಪೀಳಿಗೆಯು ಬೆಳೆಯಿತು. ಈ ಹೊಸ ಪೀಳಿಗೆಗೆ ಯೆಹೋವನ ಬಗ್ಗೆ ಮತ್ತು ಯೆಹೋವನು ಇಸ್ರೇಲಿನ ಜನರಿಗಾಗಿ ಮಾಡಿದ ಮಹತ್ಕಾರ್ಯಗಳ ಬಗ್ಗೆ ಏನೂ ಗೊತ್ತಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.
Kannada BSI Bible 2016
ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ ಯೆಹೋವನನ್ನೂ ಆತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.
Kannada Bible (KNCL) BSI 2016
ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ, ಯೆಹೋವ ದೇವರನ್ನೂ ಅವರು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.