Judges 2:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನು ನ್ಯಾಯಾಧೀಶರೆಂಬ ಕೆಲವು ನಾಯಕರನ್ನು ಆರಿಸಿದನು. ಈ ನಾಯಕರು ಇಸ್ರೇಲರನ್ನು ಅವರ ವೈರಿಗಳಿಂದ ಕಾಪಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು.
Kannada BSI Bible 2016
ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಅವರನ್ನು ಸೂರೆ ಮಾಡುವವರ ಕೈಯಿಂದ ತಪ್ಪಿಸುವದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದರೂ
Kannada Bible (KNCL) BSI 2016
ಆಗ ಸರ್ವೇಶ್ವರ ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಯೆಹೋವ ದೇವರು ಅವರನ್ನು ಕೊಳ್ಳೆಹೊಡೆಯುವವರ ಕೈಯಿಂದ ಬಿಡಿಸುವದಕ್ಕೋಸ್ಕರ ನ್ಯಾಯಾಧಿಪತಿಗಳನ್ನು ಎಬ್ಬಿಸಿದರು.