Judges 2:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಾಗಿ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, “ಈ ಜನಾಂಗದವರು ಅವರ ಪೂರ್ವಿಕರ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದಿದ್ದಾರೆ. ಇವರು ನನ್ನ ಮಾತನ್ನು ಕೇಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.
Kannada BSI Bible 2016
ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಯೆಹೋವನ ಕೋಪವು ಇಸ್ರಾಯೇಲ್ಯರ ಮೇಲೆ ಉರಿಯಹತ್ತಿತು; ಆತನು - ಈ ಜನರ ಪಿತೃಗಳಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.
Kannada Bible (KNCL) BSI 2016
ಆದ್ದರಿಂದ ಸರ್ವೇಶ್ವರನ ಕೋಪ ಇಸ್ರಯೇಲರ ಮೇಲೆ ಉರಿಯುತ್ತಲೇ ಇತ್ತು; “ಈ ಜನರ ಪೂರ್ವಜರಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಪಾಲಿಸಲಿಲ್ಲ, ನನ್ನ ಮಾತಿಗೆ ಕಿವಿಗೊಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪದಿಂದ ಉರಿಗೊಂಡು, “ಈ ಜನಾಂಗವು ನಾನು ಅವರ ಪಿತೃಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,