Judges 2:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಯೆಹೋಶುವನನ್ನು ಅವನ ಸ್ವಾಸ್ತ್ಯ ಭೂಮಿಯಲ್ಲಿ ಸಮಾಧಿ ಮಾಡಿದರು. ಅದು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿ ತಿಮ್ನತ್ ಹೆರೆಸಿನಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ಅವನ ಸ್ವಾಧೀನದ ಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುತ್ತದೆ.
Kannada BSI Bible 2016
ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್‌ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್‌ಹೆರೆಸ್‌ನಲ್ಲಿ ಹೂಣಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಅವನ ಸ್ವಾಸ್ತ್ಯಭೂವಿುಯಾದ ತಿಮ್ನತ್‍ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು; ಅದು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಗಾಷ್‍ಬೆಟ್ಟದ ಉತ್ತರದಿಕ್ಕಿನಲ್ಲಿರುತ್ತದೆ.
Kannada Bible (KNCL) BSI 2016
ಅವನನ್ನು ಅವನ ಸ್ವಾಸ್ತ್ಯಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಯಿಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನನ್ನು ಎಫ್ರಾಯೀಮನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್ ಹೆರೆಸ್‌ನಲ್ಲಿ ಹೂಳಿಟ್ಟರು.