Judges 20:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆನ್ಯಾಮೀನ್ ಕುಲದವರು ಇಪ್ಪತ್ತಾರು ಸಾವಿರ ಸೈನಿಕರನ್ನು ಒಟ್ಟುಗೂಡಿಸಿದರು. ಆ ಸೈನಿಕರೆಲ್ಲರು ಯುದ್ಧದ ತರಬೇತಿಯನ್ನು ಪಡೆದವರಾಗಿದ್ದರು. ಗಿಬೆಯ ನಗರದಲ್ಲಿಯೂ ಏಳುನೂರು ಜನರು ತರಬೇತಿ ಪಡೆದ ಸೈನಿಕರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಸೇರಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು.
Kannada BSI Bible 2016
ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿವಸದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು.
Kannada Bible (KNCL) BSI 2016
ಆ ದಿವಸದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆ ಇಪ್ಪತ್ತಾರು ಸಾವಿರ. ಇವರಲ್ಲದೆ ಗಿಬೆಯದಲ್ಲಿಯೇ ಏಳುನೂರು ಮಂದಿ ಯುದ್ಧವೀರರಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಾಲದಲ್ಲಿ ಆಯಾ ಪಟ್ಟಣಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು.