Judges 20:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಯೆಹೋವನ ಬಳಿಗೆ ಹೋಗಿ ಸಾಯಂಕಾಲದವರೆಗೂ ಮೊರೆಯಿಟ್ಟರು. “ನಾವು ಮತ್ತೆ ಬೆನ್ಯಾಮೀನ್ಯರೊಡನೆ ಯುದ್ಧ ಮಾಡಲು ಹೋಗಬೇಕೇ? ಅವರು ನಮ್ಮ ಬಂಧುಗಳು” ಎಂದು ಅವರು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಹೋಗಿರಿ, ಅವರ ವಿರುದ್ಧ ಯುದ್ಧ ಮಾಡಿರಿ” ಎಂದು ಉತ್ತರಿಸಿದನು. ಇಸ್ರೇಲರು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿದರು. ಮೊದಲನೇ ದಿನದಂತೆ ಅವರು ಮತ್ತೊಮ್ಮೆ ಯುದ್ಧಕ್ಕೆ ಹೋದರು. (Verses 22-23)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರು ತಿರುಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹಕಟ್ಟಿದ ಸ್ಥಳದಲ್ಲೇ ತಿರುಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.
Kannada BSI Bible 2016
ಇಸ್ರಾಯೇಲ್‌ ಮನುಷ್ಯರಾದ ಜನರು ಬಲ ಗೊಂಡು ಮೊದಲನೇ ದಿನ ಯುದ್ಧಕ್ಕೆ ವ್ಯೂಹಕಟ್ಟಿದ ಸ್ಥಳದಲ್ಲಿ ತಿರಿಗಿ ವ್ಯೂಹ ಕಟ್ಟಿದರು. (ಇಸ್ರಾಯೇಲ್‌ ಮಕ್ಕಳು ಕರ್ತನ ಬಳಿಗೆ ಹೋಗಿ ಆತನ ಮುಂದೆ ಸಾಯಂಕಾಲದ ವರೆಗೆ ಅತ್ತು--ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗಬೇಕೋ ಎಂದು ಕರ್ತನನ್ನು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ತಿರಿಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹ ಕಟ್ಟಿದ ಸ್ಥಳದಲ್ಲೇ ತಿರಿಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.
Kannada Bible (KNCL) BSI 2016
ಇಸ್ರಯೇಲರು ಪುನಃ ಧೈರ್ಯ ತಂದುಕೊಂಡು ಮೊದಲನೆಯ ದಿನ ವ್ಯೂಹಕಟ್ಟಿದ ಸ್ಥಳದಲ್ಲೇ ಮತ್ತೆ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರಾದ ಜನರು ಬಲಗೊಂಡು, ಮೊದಲನೆಯ ದಿವಸ ಯುದ್ಧಕ್ಕೆ ವ್ಯೂಹ ಕಟ್ಟಿದ ಸ್ಥಳದಲ್ಲಿ ತಿರುಗಿ ವ್ಯೂಹ ಕಟ್ಟಿದರು.