Judges 20:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎರಡನೆಯ ದಿನವೂ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದ ಮೇಲೆ ಧಾಳಿಮಾಡಲು ಗಿಬೆಯ ಪಟ್ಟಣದಿಂದ ಹೊರಗೆ ಬಂತು. ಈ ಸಲ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಹದಿನೆಂಟು ಸಾವಿರ ಜನರನ್ನು ಕೊಂದುಹಾಕಿತು. ಇಸ್ರೇಲ್ ಸೈನ್ಯದ ಆ ಜನರೆಲ್ಲಾ ತರಬೇತಿ ಪಡೆದ ಸೈನಿಕರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಉರುಳಿಸಿದರು.
Kannada BSI Bible 2016
ಇನ್ನೂ ಇಸ್ರಾಯೇಲ್‌ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಬೀಳಿಸಿದರು.
Kannada Bible (KNCL) BSI 2016
ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಯೇಲರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಬೀಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯಾದಿಂದ ಹೊರಗೆ ಬಂದು ಇಸ್ರಾಯೇಲರಲ್ಲಿ ಖಡ್ಗ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.