Judges 20:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಇಸ್ರೇಲಿನ ಜನರೆಲ್ಲರು ಬೇತೇಲಿಗೆ ಹೋದರು. ಅಲ್ಲಿ ಅವರು ಕುಳಿತುಕೊಂಡು ಯೆಹೋವನಿಗೆ ಮೊರೆಯಿಟ್ಟರು. ಅವರು ಸಾಯಂಕಾಲದವರೆಗೆ ಏನೂ ತಿನ್ನಲಿಲ್ಲ. ಇದಲ್ಲದೆ ಅವರು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.
Kannada BSI Bible 2016
ಆಗ ಇಸ್ರಾಯೇಲ್‌ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದವರೆಗೂ ಉಪವಾಸ ಮಾಡಿದರು. ಇದಲ್ಲದೆ ಅವರು ಆತನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
Kannada Bible (KNCL) BSI 2016
ಆಗ ಎಲ್ಲ ಜನರು ಬೇತೇಲಿಗೆ ಹೋಗಿ ಅಲ್ಲಿ ಸರ್ವೇಶ್ವರನ ಮುಂದೆ ಅಳುತ್ತಾ ಕುಳಿತು, ಸಾಯಂಕಾಲದವರೆಗೆ ಉಪವಾಸಮಾಡಿದರು. ಇದಲ್ಲದೆ ಅವರು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲರೆಲ್ಲರೂ ಸಮಸ್ತ ಸೇನೆಯೂ ಬೇತೇಲಿಗೆ ಹೊರಟು, ಅಲ್ಲಿ ಅಳುತ್ತಾ ಯೆಹೋವ ದೇವರ ಮುಂದೆ ಕುಳಿತುಕೊಂಡು, ಆ ಸಂಜೆಯವರೆಗೆ ಉಪವಾಸವಾಗಿದ್ದು, ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು.