Judges 20:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನ್ಯಾಮೀನ್ಯರು, “ಮುಂಚಿನಂತೆ ನಾವು ಗೆಲ್ಲುತ್ತಿದ್ದೇವೆ” ಎಂದು ಭಾವಿಸಿದ್ದರು. ಇಸ್ರೇಲಿನ ಜನರು ಓಡಿಹೋಗುತ್ತಿದ್ದರು. ಆದರೆ ಇದೊಂದು ತಂತ್ರವಾಗಿತ್ತು. ಅವರು ಬೆನ್ಯಾಮೀನ್ಯರನ್ನು ನಗರದಿಂದ ಬಹುದೂರ ಕರೆದುಕೊಂಡು ಹೋಗಬೇಕೆಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನ್ಯರು, “ಅವರು ಮುಂಚಿನಂತೆ ಈಗಲೂ ಸೋತುಹೋಗುತ್ತಾರೆ” ಎಂದು ಅಂದುಕೊಂಡರು. ಇಸ್ರಾಯೇಲ್ಯರಾದರೋ, “ಅವರು ತಮ್ಮ ಪಟ್ಟಣಕ್ಕೆ ದೂರವಾಗುವಂತೆ ನಾವು ಸ್ವಲ್ಪ ದೂರ ಓಡಿಹೋಗೋಣ” ಎಂದು ಮಾತನಾಡಿಕೊಂಡು,
Kannada BSI Bible 2016
ಬೆನ್ಯಾವಿಾನನ ಮಕ್ಕಳು--ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದುಕೊಂಡರು. ಆದರೆ ಇಸ್ರಾಯೇಲ್ ಮಕ್ಕಳು--ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳಕೊಳ್ಳುವ ಹಾಗೆ ನಾವು ಓಡಿಹೋಗೋಣ ಎಂದು ಅಂದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನ್ಯರು - ಅವರು ಮುಂಚಿನಂತೆ ಈಗಲೂ ಸೋತುಹೋಗುತ್ತಾರೆಂದು ನೆನಸಿದರು, ಇಸ್ರಾಯೇಲ್ಯರಾದರೋ - ಅವರು ತಮ್ಮ ಪಟ್ಟಣಕ್ಕೆ ದೂರವಾಗುವಂತೆ ನಾವು ಸ್ವಲ್ಪ ದೂರ ಓಡಿಹೋಗೋಣ ಎಂದು ಮಾತಾಡಿಕೊಂಡು
Kannada Bible (KNCL) BSI 2016
ಬೆನ್ಯಾಮೀನ್ಯರು, “ಅವರು ಮುಂಚಿನಂತೆ ಈಗಲೂ ಸೋತುಹೋಗುತ್ತಾರೆ” ಎಂದು ನೆನೆಸಿದರು. ಇಸ್ರಯೇಲರಾದರೋ, “ಅವರು ತಮ್ಮ ಪಟ್ಟಣಕ್ಕೆ ದೂರವಾಗುವಂತೆ ನಾವು ಸ್ವಲ್ಪ ದೂರ ಓಡಿಹೋಗೋಣ,” ಎಂದು ಮಾತನಾಡಿಕೊಂಡು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ಯಾಮೀನ್ಯರು, “ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಸೋತುಹೋಗುತ್ತಾರೆ,” ಎಂದುಕೊಂಡರು. ಆದರೆ ಇಸ್ರಾಯೇಲರು, “ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳೆದುಕೊಳ್ಳುವ ಹಾಗೆ ನಾವು ಹಿಂದಕ್ಕೆ ಓಡಿಹೋಗೋಣ,” ಎಂದುಕೊಂಡರು.