Judges 20:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ಹತ್ತು ಸಾವಿರ ಸೈನಿಕರು ಅಂದರೆ ತರಬೇತಿ ಪಡೆದ ಸೈನಿಕರು ಗಿಬೆಯ ನಗರದ ಮೇಲೆ ಧಾಳಿಮಾಡಿದರು. ಘೋರವಾದ ಯುದ್ಧ ನಡೆಯಿತು. ಆದರೆ ಇಂಥ ಭೀಕರ ಪರಿಸ್ಥಿತಿ ಉಂಟಾಗಬಹುದೆಂಬುದು ಬೆನ್ಯಾಮೀನ್ಯರಿಗೆ ತಿಳಿದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಟ್ಟಣದ ಮುಂದೆ ಬಂದರು; ಅವರು ಸುಮಾರು ಹತ್ತು ಸಾವಿರ ಮಂದಿ ಯುದ್ಧವೀರರು. ಯುದ್ಧವು ಬಹುಘೋರವಾಯಿತು. ತಮಗೆ ಅಪಾಯವು ಒದಗಿ ಬಂದಿದೆ ಎಂಬುದು ಬೆನ್ಯಾಮೀನ್ಯರಿಗೆ ಇನ್ನೂ ಗೊತ್ತಾಗಿರಲಿಲ್ಲ.
Kannada BSI Bible 2016
ಅವರಲ್ಲಿ ಆದುಕೊಳ್ಳಲ್ಪಟ್ಟ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಟ್ಟಣದ ಮುಂದೆ ಬಂದರು; ಅವರು ಸುಮಾರು ಹತ್ತು ಸಾವಿರ ಮಂದಿ ಯುದ್ಧವೀರರು. ಯುದ್ಧವು ಬಹು ಘೋರವಾಯಿತು. ತಮಗೆ ಅಪಾಯವು ಒದಗಿ ಬಂದದೆ ಎಂಬದು ಬೆನ್ಯಾಮೀನ್ಯರಿಗೆ ಇನ್ನೂ ಗೊತ್ತಾಗಲಿಲ್ಲ.
Kannada Bible (KNCL) BSI 2016
ಅವರ ಸಂಖ್ಯೆ ಸುಮಾರು ಹತ್ತು ಸಾವಿರ ಮಂದಿ ಯುದ್ಧವೀರರು. ಯುದ್ಧ ಬಹಳ ಘೋರವಾಯಿತು. ತಮಗೆ ಅಪಾಯ ಒದಗಿಬಂದಿದೆ ಎಂಬುದು ಬೆನ್ಯಾಮೀನ್ಯರಿಗೆ ಇನ್ನೂ ಗೊತ್ತಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿ ಆರಿಸಿದ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು. ಆದರೆ ಬೆನ್ಯಾಮೀನ್ಯರು, ಕೇಡು ತಮಗೆ ಸಮೀಪವಾಗಿತ್ತೆಂದು ಅರಿಯದೆ ಇದ್ದರು.