Judges 20:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಇಸ್ರೇಲಿನ ಸೈನ್ಯದಿಂದ ಬೆನ್ಯಾಮೀನ್ಯರ ಸೈನ್ಯವನ್ನು ಸೋಲಿಸಿದನು. ಆ ದಿನ ಇಸ್ರೇಲಿ ಸೈನಿಕರು ಬೆನ್ಯಾಮೀನ್ಯರ ಇಪ್ಪತೈದು ಸಾವಿರದ ನೂರು ಸೈನಿಕರನ್ನು ಕೊಂದುಹಾಕಿದರು. ಆ ಸೈನಿಕರೆಲ್ಲಾ ಯುದ್ಧದ ತರಬೇತಿ ಪಡೆದವರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಸ್ರಾಯೇಲರಿಗೆ ಜಯವನ್ನು ಕೊಟ್ಟಿದ್ದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯರ ಯೋಧರನ್ನು ಹತಮಾಡಿದರು.
Kannada BSI Bible 2016
ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಸ್ರಾಯೇಲ್ಯರಿಗೆ ಜಯಕೊಟ್ಟದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯ ಭಟರನ್ನು ಹತಮಾಡಿದರು.
Kannada Bible (KNCL) BSI 2016
ಸರ್ವೇಶ್ವರ ಇಸ್ರಯೇಲರಿಗೆ ಜಯಕೊಟ್ಟದ್ದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯ ಯೋಧರನ್ನು ಕೊಂದುಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಇಸ್ರಾಯೇಲಿನ ಮುಂದೆ ಬೆನ್ಯಾಮೀನ್ಯರನ್ನು ಹೊಡೆದರು. ಆ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರಲ್ಲಿ ಖಡ್ಗ ಹಿಡಿಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯರನ್ನು ನಾಶಮಾಡಿದರು.