Judges 20:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆನ್ಯಾಮೀನ್ಯರ ಸೈನಿಕರು ಸುಮಾರು ಮೂವತ್ತು ಜನ ಇಸ್ರೇಲಿ ಸೈನಿಕರನ್ನು ಕೊಂದುಹಾಕಿದ್ದರು. ಆದ್ದರಿಂದ ಬೆನ್ಯಾಮೀನ್ಯರು, “ನಾವು ಮುಂಚಿನಂತೆ ಗೆಲ್ಲುತ್ತಿದ್ದೇವೆ” ಎಂದು ಭಾವಿಸಿದ್ದರು. ಆಗ ನಗರದಿಂದ ಹೊಗೆಯು ಸ್ತಂಭದೋಪಾದಿಯಲ್ಲಿ ಮೇಲೇರುತ್ತಿತ್ತು. ಬೆನ್ಯಾಮೀನ್ಯರು ಹಿಂತಿರುಗಿ ನೋಡಿದಾಗ ಅವರಿಗೆ ಹೊಗೆ ಕಾಣಿಸಿತು. ಇಡೀ ನಗರವು ಉರಿಯುತ್ತಿತ್ತು. ಆಗ ಇಸ್ರೇಲರ ಸೈನಿಕರು ಓಡಿಹೋಗುವುದನ್ನು ನಿಲ್ಲಿಸಿ ಯುದ್ಧ ಮಾಡುವುದಕ್ಕೆ ಪ್ರಾರಂಭಿಸಿದರು. ಬೆನ್ಯಾಮೀನ್ಯರು ಅಂಜಿದರು. ಎಂಥ ಭಯಾನಕ ಪರಿಸ್ಥಿತಿ ಉಂಟಾಗಿದೆ ಎಂಬುದು ಈಗ ಅವರಿಗೆ ಗೊತ್ತಾಯಿತು. (Verses 39-41)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನ್ಯರಾದರೋ, “ಇಸ್ರಾಯೇಲ್ಯರು ಮುಂಚಿನಂತೆ ನಮ್ಮ ಮುಂದೆ ಸೋತುಹೋದರು” ಎಂದು ತಿಳಿದು ಅವರನ್ನು ಹತಮಾಡಲು ಪ್ರಾರಂಭಿಸಿ, ಸುಮಾರು ಮೂವತ್ತು ಮಂದಿಯನ್ನು ಕೊಂದುಹಾಕಿದರು.
Kannada BSI Bible 2016
ಇಸ್ರಾಯೇಲ್‌ ಮನುಷ್ಯರು ಯುದ್ಧದಲ್ಲಿ ಹಿಂದೆಗೆದಾಗ ಬೆನ್ಯಾವಿಾನ್ಯರು ಇಸ್ರಾ ಯೇಲ್ಯರನ್ನು ಹೊಡೆಯುವದಕ್ಕೆ ಪ್ರಾರಂಭಿಸಿ ಅವರಲ್ಲಿ ಹೆಚ್ಚುಕಡಿಮೆ ಮೂವತ್ತು ಜನರನ್ನು ಕೊಂದಾಗ ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನ್ಯರಾದರೋ - ಇಸ್ರಾಯೇಲ್ಯರು ಮುಂಚಿನಂತೆ ನಮ್ಮ ಮುಂದೆ ಸೋತುಹೋದರೆಂದು ನೆನಸಿ ಅವರನ್ನು ಹತಿಸ ಪ್ರಾರಂಭಿಸಿ ಸುಮಾರು ಮೂವತ್ತು ಮಂದಿಯನ್ನು ಕೊಂದುಹಾಕಿದರು.
Kannada Bible (KNCL) BSI 2016
ಬೆನ್ಯಾಮೀನ್ಯರಾದರೋ, ಇಸ್ರಯೇಲರು ಮುಂಚಿನಂತೆ ನಮ್ಮ ಮುಂದೆ ಸೋತುಹೋದರೆಂದು ನೆನೆಸಿ ಅವರನ್ನು ಸಂಹರಿಸಲು ಪ್ರಾರಂಭಿಸಿ ಸುಮಾರು ಮೂವತ್ತು ಮಂದಿಯನ್ನು ಕೊಂದುಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತದನಂತರ ಇಸ್ರಾಯೇಲರು ಪ್ರತಿದಾಳಿ ನಡೆಸಿದರು. ಬೆನ್ಯಾಮೀನ್ಯರು ಇಸ್ರಾಯೇಲರನ್ನು ಹೊಡೆಯುವುದಕ್ಕೆ ಪ್ರಾರಂಭಿಸಿ, ಅವರಲ್ಲಿ ಹೆಚ್ಚು ಕಡಿಮೆ ಮೂವತ್ತು ಜನರನ್ನು ಕೊಂದಾಗ, “ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಸೋತುಹೋದರು,” ಎಂದು ಅಂದುಕೊಂಡರು.