Judges 20:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ, ಕೊಲೆಗೀಡಾದ ಆ ಸ್ತ್ರೀಯ ಗಂಡನಾದ ಲೇವಿಯನು ನಡೆದ ಕಥೆಯನ್ನು ಹೇಳಿದನು. ಅವನು, “ನಾನೂ ನನ್ನ ಉಪಪತ್ನಿಯೂ ಬೆನ್ಯಾಮೀನ್ಯರ ಪ್ರದೇಶವಾದ ಗಿಬೆಯ ನಗರಕ್ಕೆ ಬಂದೆವು. ಅಲ್ಲಿ ಆ ರಾತ್ರಿ ಇಳಿದುಕೊಂಡೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು, “ನಾನು ನನ್ನ ಉಪಪತ್ನಿಯ ಸಹಿತವಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಉಳಿದುಕೊಂಡೆನು.
Kannada BSI Bible 2016
ಯಾವನ ಹೆಂಡತಿ ಕೊಲ್ಲಲ್ಪಟ್ಟಳೋ ಆ ಪುರುಷನಾದ ಲೇವಿಯನು ಅವರಿಗೆ ಪ್ರತ್ಯುತ್ತರ ಕೊಟ್ಟು--ನಾನು ಬೆನ್ಯಾವಿಾನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳುಕೊಳ್ಳು ವದಕ್ಕೆ ಬಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು - ನಾನು ನನ್ನ ಉಪಪತ್ನಿಯ ಸಹಿತವಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಇಳುಕೊಂಡೆನು.
Kannada Bible (KNCL) BSI 2016
ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು, “ನಾನು ನನ್ನ ಉಪಪತ್ನಿಯ ಸಹಿತನಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಇಳಿದುಕೊಂಡಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು ಅವರಿಗೆ ಉತ್ತರಕೊಟ್ಟು, “ನಾನು ಬೆನ್ಯಾಮೀನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳಿದುಕೊಳ್ಳುವುದಕ್ಕೆ ಬಂದೆನು.