Judges 20:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನ ಬೆನ್ಯಾಮೀನ್ಯರ ಇಪ್ಪತ್ತೈದು ಸಾವಿರ ಜನ ಸೈನಿಕರು ಕೊಲ್ಲಲ್ಪಟ್ಟರು. ಅವರೆಲ್ಲರೂ ಕೈಯಲ್ಲಿ ಖಡ್ಗ ಹಿಡಿದು ಬಹಳ ಶೂರತನದಿಂದ ಯುದ್ಧ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಆ ದಿನ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಸೈನಿಕರು ಸಂಹರಿಸಲ್ಪಟ್ಟರು.
Kannada BSI Bible 2016
ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಆ ದಿವಸ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಭಟರು ಸಂಹೃತರಾದರು.)
Kannada Bible (KNCL) BSI 2016
ಹೀಗೆ ಆ ದಿವಸ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಯೋಧರು ಸಂಹೃತರಾದರು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಬೆನ್ಯಾಮೀನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಖಡ್ಗ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.