Judges 20:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ರಾತ್ರಿ ಸಮಯದಲ್ಲಿ ಗಿಬೆಯ ನಗರದ ಮುಖಂಡರು ಬಂದು ನಾವು ಇಳಿದುಕೊಂಡ ಮನೆಗೆ ಮುತ್ತಿಗೆ ಹಾಕಿದರು. ಅವರು ನನ್ನನ್ನು ಕೊಲ್ಲಬೇಕೆಂದಿದ್ದರು. ಅವರು ನನ್ನ ಉಪಪತ್ನಿಯ ಮೇಲೆ ಬಲಾತ್ಕಾರ ಮಾಡಿದರು; ಆಗ ಅವಳು ಸತ್ತುಹೋದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಊರಿನ ಜನರು ನನ್ನನ್ನು ಕೊಲ್ಲಬೇಕೆಂದು ಅದೇ ರಾತ್ರಿ ನಾನು ಇಳಿದುಕೊಂಡಿದ್ದ ಮನೆಯನ್ನು ಸುತ್ತಿಕೊಂಡರು, ಮತ್ತು ನನ್ನ ಉಪಪತ್ನಿಯನ್ನು ಭಂಗಪಡಿಸಿದರು, ಆಕೆಯು ಸತ್ತುಹೋದಳು.
Kannada BSI Bible 2016
ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಊರಿನ ಜನರು ಅದೇ ರಾತ್ರಿ ನಾನು ಇಳುಕೊಂಡಿದ್ದ ಮನೆಯನ್ನು ಸುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು; ಮತ್ತು ನನ್ನ ಉಪಪತ್ನಿಯನ್ನು ಬಹಳವಾಗಿ ಭಂಗಪಡಿಸಿದರು. ಆಕೆಯು ಸತ್ತಳು.
Kannada Bible (KNCL) BSI 2016
ಆ ಊರಿನ ಜನರು ಅದೇ ರಾತ್ರಿ ನಾನು ಇಳಿದುಕೊಂಡಿದ್ದ ಮನೆಯನ್ನು ಸುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು; ಮತ್ತು ನನ್ನ ಉಪಪತ್ನಿಯ ಮೇಲೆ ಅತ್ಯಾಚಾರಮಾಡಿದರು. ಆಕೆ ಸತ್ತಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು, ನಾನು ಇಳಿದಿದ್ದ ಮನೆಯನ್ನು ರಾತ್ರಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು ಮತ್ತು ನನ್ನ ಉಪಪತ್ನಿಯನ್ನು ಅತ್ಯಾಚಾರಮಾಡಿದರು. ಅವಳು ಸತ್ತುಹೋದಳು.