Judges 21:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಹನ್ನೆರಡು ಸಾವಿರ ಸೈನಿಕರನ್ನು ಕಳುಹಿಸಿದರು. ಅವರು ಆ ಸೈನಿಕರಿಗೆ, “ಯಾಬೇಷ್ ಗಿಲ್ಯಾದಿಗೆ ಹೋಗಿರಿ; ಹೆಂಗಸರು ಮತ್ತು ಮಕ್ಕಳ ಸಮೇತ ಪ್ರತಿಯೊಬ್ಬರನ್ನೂ ನಿಮ್ಮ ಕತ್ತಿಯಿಂದ ಕೊಂದುಹಾಕಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ, ಸ್ತ್ರೀಯರನ್ನೂ, ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು;
Kannada BSI Bible 2016
ಇಗೋ, ಯಾಬೇಷ್‌ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್‌ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ - ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು;
Kannada Bible (KNCL) BSI 2016
ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕಮಕ್ಕಳನ್ನೂ ಬಿಡದೆ ಸಂಹರಿಸಬೇಕು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ, ಅವರಿಗೆ, “ನೀವು ಹೋಗಿ, ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡ, ಖಡ್ಗದಿಂದ ಸಂಹರಿಸಿಬಿಡಿರಿ.