Judges 21:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಹನ್ನೆರಡು ಸಾವಿರ ಸೈನಿಕರು ಯಾಬೇಷ್ ಗಿಲ್ಯಾದಿನಲ್ಲಿ ಗಂಡಸಿನೊಂದಿಗೆ ಎಂದೂ ಲೈಂಗಿಕ ಸಂಪರ್ಕ ಹೊಂದದ ನಾನೂರು ಜನ ಯುವತಿಯರನ್ನು ಗುರುತಿಸಿದರು. ಆ ಯುವತಿಯರನ್ನು ಸೈನಿಕರು ಶೀಲೋವಿನಲ್ಲಿದ್ದ ಪಾಳೆಯಕ್ಕೆ ಕರೆತಂದರು. ಶೀಲೋವ್ ಕಾನಾನ್ ಪ್ರದೇಶದಲ್ಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವುದಕ್ಕೆ ಹೋದವರು ಇವರನ್ನು ಉಳಿಸಿ, ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.
Kannada BSI Bible 2016
ಹಾಗೆಯೆ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್‌ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವದಕ್ಕೆ ಹೋದವರು ಇವರನ್ನು ಉಳಿಸಿ ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.
Kannada Bible (KNCL) BSI 2016
ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರು ಇದ್ದರು. ಪಟ್ಟಣವನ್ನು ನಾಶಪಡಿಸುವುದಕ್ಕೆ ಹೋದವರು ಇವರನ್ನು ಉಳಿಸಿ ಕಾನಾನ್ ನಾಡಿನ ಶಿಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡರು. ಅವರು ಯಾವುದೇ ಪುರುಷರೊಂದಿಗೆ ಸಂಬಂಧ ಹೊಂದಿರಲಿಲ್ಲ. ಅವರನ್ನು ಕಾನಾನ್ ದೇಶದಲ್ಲಿರುವ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತಂದರು.