Judges 21:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮಗೊಂದು ವಿಚಾರಹೊಳೆದಿದೆ. ಇದು ಶೀಲೋವಿನಲ್ಲಿ ಯೆಹೋವನ ಉತ್ಸವ ನಡೆಯುವ ಕಾಲ. ಈ ಉತ್ಸವವನ್ನು ಅಲ್ಲಿ ಪ್ರತಿವರ್ಷ ಆಚರಿಸಲಾಗುತ್ತದೆ.” (ಶೀಲೋವ್ ನಗರವು ಬೇತೇಲ್ ನಗರದ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ದಾರಿಯ ಪೂರ್ವಕ್ಕೂ ಲೆಬೋನಿನ ದಕ್ಷಿಣಕ್ಕೂ ಇದೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬುದು ಅವರ ನೆನಪಿಗೆ ಬಂದಿತು. (ಶೀಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ, ಲೆಬೋನದ ದಕ್ಷಿಣಕ್ಕೂ ಇರುತ್ತದೆ.)
Kannada BSI Bible 2016
ಅವರು--ಇಗೋ, ಬೇತೇಲಿಗೆ ಉತ್ತರದಲ್ಲಿಯೂ ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿ ವರುಷ ಕರ್ತನ ಹಬ್ಬ ಉಂಟೆಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೀಲೋವಿನಲ್ಲಿ ವರ್ಷ ವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬದು ಅವರಿಗೆ ನೆನಪಿಗೆ ಬಂದಿತು. (ಶೀಲೋ ಎಂಬದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆವಿುಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ ಲೆಬೋನದ ದಕ್ಷಿಣಕ್ಕೂ ಇರುತ್ತದೆ.)
Kannada Bible (KNCL) BSI 2016
ಎಂದು ಮಾತನಾಡಿಕೊಳ್ಳುತ್ತಿರುವಾಗ ಶಿಲೋವಿನಲ್ಲಿ ವರ್ಷ ವರ್ಷ ಸರ್ವೇಶ್ವರನ ಉತ್ಸವ ನಡೆಯುತ್ತದೆಂಬುದು ಅವರಿಗೆ ನೆನಪಿಗೆ ಬಂದಿತು. (ಶಿಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ ಲೇಬೋನದ ದಕ್ಷಿಣಕ್ಕೂ ಇರುತ್ತದೆ.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬೇತೇಲಿಗೆ ಉತ್ತರದಲ್ಲಿಯೂ, ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವ ದೇವರ ಹಬ್ಬವುಂಟೆಂದು ಹೇಳಿದರು.