Judges 3:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರ ಪ್ರದೇಶವನ್ನು ಬಿಟ್ಟುಹೋಗುವಂತೆ ಯೆಹೋವನು ಉಳಿದೆಲ್ಲ ಜನಾಂಗದವರನ್ನು ಒತ್ತಾಯಪಡಿಸಲಿಲ್ಲ. ಯೆಹೋವನು ಇಸ್ರೇಲರನ್ನು ಪರೀಕ್ಷಿಸಬೇಕೆಂದಿದ್ದನು. ಈಗ ಬದುಕಿದ್ದ ಇಸ್ರೇಲರಲ್ಲಿ ಯಾರೂ ಕಾನಾನ್ಯರ ಭೂಮಿಯನ್ನು ತೆಗೆದುಕೊಳ್ಳುವುದಕ್ಕಾಗಿ ಯುದ್ಧ ಮಾಡಿರಲಿಲ್ಲ. ಅದಕ್ಕಾಗಿ ಯೆಹೋವನು ಆ ಬೇರೆ ಜನಾಂಗದವರನ್ನು ಅವರ ದೇಶದಲ್ಲಿ ವಾಸಿಸಲು ಬಿಟ್ಟನು. (ಆ ಯುದ್ಧಗಳಲ್ಲಿ ಭಾಗವಹಿಸದ ಈ ಇಸ್ರೇಲರಿಗೆ ಯುದ್ಧ ಮಾಡುವುದನ್ನು ಕಲಿತುಕೊಳ್ಳಲು ಒಂದು ಅವಕಾಶ ದೊರೆಯುವಂತೆ ಯೆಹೋವನು ಹೀಗೆ ಮಾಡಿದ್ದನು.) ಯೆಹೋವನು ಆ ಭೂಮಿಯಲ್ಲಿ ವಾಸಿಸಲು ಬಿಟ್ಟ ಜನಾಂಗಗಳ ಹೆಸರುಗಳು ಇಂತಿವೆ: (Verses 1-2)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,
Kannada BSI Bible 2016
ಕಾನಾನ್‌ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ನೋಡದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವದಕ್ಕೂ
Kannada Bible (KNCL) BSI 2016
ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದರಲ್ಲೂ ಪಾಲ್ಗೊಳ್ಳದೆ ಇದ್ದ ಇಸ್ರಯೇಲರನ್ನು ಪರೀಕ್ಷಿಸುವುದಕ್ಕೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾನಾನ್ ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲರನ್ನು ಪರೀಕ್ಷಿಸುವುದಕ್ಕೂ,