Judges 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒತ್ನೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ನೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮ್‌ನನ್ನು ಸೋಲಿಸಲು ಯೆಹೋವನು ಒತ್ನೀಯೇಲನಿಗೆ ಸಹಾಯ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.
Kannada BSI Bible 2016
ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್‌ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್‌ರಿಷಾತಯಿಮಿನ ಮೇಲೆ ಬಲವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನು ಇಸ್ರಾಯೇಲ್ಯರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದರಿಂದ ಅವನು ಅವನನ್ನು ಪೂರ್ಣವಾಗಿ ಸೋಲಿಸಿಬಿಟ್ಟನು.
Kannada Bible (KNCL) BSI 2016
ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.