Judges 3:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಯೆಹೋವನಿಗೆ ಮೊರೆಯಿಟ್ಟರು. ಇಸ್ರೇಲರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಏಹೂದ. ಅವನು ಎಡಚನಾಗಿದ್ದನು. ಅವನು ಬೆನ್ಯಾಮೀನ್ ಕುಲದ ಗೇರ ಎಂಬವನ ಮಗನಾಗಿದ್ದನು. ಇಸ್ರೇಲರು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪಕಾಣಿಕೆಯನ್ನು ಕೊಡಲು ಏಹೂದನನ್ನು ಕಳುಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.
Kannada BSI Bible 2016
ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್‌ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲ್ಯರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.
Kannada Bible (KNCL) BSI 2016
ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇಸ್ರಾಯೇಲರು ಯೆಹೋವ ದೇವರನ್ನು ಕೂಗಿದಾಗ, ಯೆಹೋವ ದೇವರು ಅವರಿಗೆ ಬೆನ್ಯಾಮೀನನಾದ ಗೇರನ ಮಗ ಏಹೂದನನ್ನು ರಕ್ಷಿಸುವುದಕ್ಕೆ ಎಬ್ಬಿಸಿದರು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲರು ಮೋವಾಬಿನ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.