Judges 3:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಾಗಿ ಸೇವಕರು ಬಹಳ ಹೊತ್ತಿನವರೆಗೆ ಅರಸನಿಗಾಗಿ ಕಾಯುತ್ತಾ ಚಿಂತೆಗೊಳಗಾದರು. ಅವರು ಬೀಗದ ಕೈಯನ್ನು ತಂದು ಬಾಗಿಲುಗಳನ್ನು ತೆರೆದರು. ಸೇವಕರು ಒಳಗೆ ಹೋದಾಗ ತಮ್ಮ ಅರಸನು ನೆಲದ ಮೇಲೆ ಸತ್ತು ಬಿದ್ದಿರುವುದನ್ನು ಕಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು.
Kannada BSI Bible 2016
ಅವರು ತಮಗೆ ನಾಚಿಕೆ ಯಾಗುವ ಮಟ್ಟಿಗೂ ಕಾದಿದ್ದರು. ಆದರೆ ಇಗೋ, ಅವನು ಕೊಠಡಿಯ ಬಾಗಿಲನ್ನು ತೆರೆಯದೆ ಇದ್ದದರಿಂದ ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆದರು, ಇಗೋ, ಅವರ ಪ್ರಭುವು ನೆಲದ ಮೇಲೆ ಸತ್ತು ಬಿದ್ದಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆಯಲು ಇಗೋ ಅವರ ಒಡೆಯನು ಸತ್ತು ಬಿದ್ದಿದ್ದನು.
Kannada Bible (KNCL) BSI 2016
ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಅರಸ ಕದಗಳನ್ನು ತೆರೆಯದೆ ಇರುವುದನ್ನು ನೋಡಿ ಬೀಗದ ಕೈಯಿಂದ ತಾವೇ ಬಾಗಿಲು ತೆರೆದರು. ಇಗೋ, ಅವರ ಒಡೆಯ ನೆಲದ ಮೇಲೆ ಸತ್ತುಬಿದ್ದಿದ್ದನು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮಗೆ ಬೇಸರವಾಗುವ ಮಟ್ಟಿಗೂ ಕಾದಿದ್ದರು. ಆದರೆ, ಅವನು ಕೊಠಡಿ ಬಾಗಿಲನ್ನು ತೆರೆಯದೆ ಇದ್ದುದರಿಂದ, ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆದರು. ಅವರ ಪ್ರಭುವು ನೆಲದ ಮೇಲೆ ಮರಣಹೊಂದಿದ್ದನು.