Judges 3:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಹೂದನು ಇಸ್ರೇಲರಿಗೆ, “ನನ್ನನ್ನು ಹಿಂಬಾಲಿಸಿರಿ, ನಮ್ಮ ಶತ್ರುಗಳಾದ ಮೋವಾಬ್ಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ” ಎಂದನು. ಇಸ್ರೇಲರು ಏಹೂದನನ್ನು ಹಿಂಬಾಲಿಸಿದರು. ಅವರು ಜೋರ್ಡನ್ ನದಿಯ ಹಾಯಗಡಗಳನ್ನೆಲ್ಲಾ ವಶಪಡಿಸಿಕೊಂಡರು. ಆ ಸ್ಥಳಗಳು ಮೋವಾಬಿಗೆ ಹೋಗುವ ದಾರಿಯಲ್ಲಿದ್ದವು. ಜೋರ್ಡನ್ ನದಿಯನ್ನು ದಾಟಿಹೋಗಲು ಇಸ್ರೇಲರು ಯಾರಿಗೂ ಅವಕಾಶ ಕೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.
Kannada BSI Bible 2016
ಅವರ ಸಂಗಡ--ನೀವು ನನ್ನ ಹಿಂದೆ ಬನ್ನಿರಿ; ಕರ್ತನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು ಎಂದು ಅಂದನು. ಅವರು ಅವನ ಹಿಂದೆ ಬಂದು ಮೋವಾಬ್ಯ ರಿಗೆ ಎದುರಾದ ಯೊರ್ದನಿನ ರೇವುಗಳನ್ನು ಹಿಡಿದು ಒಬ್ಬರನ್ನಾದರೂ ದಾಟಗೊಡದೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವರ ನಾಯಕನಾಗಿ - ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆಂದು ಹೇಳಲು ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.
Kannada Bible (KNCL) BSI 2016
ಏಹೂದನು ಅವರಿಗೆ ನಾಯಕನಾಗಿ, “ನನ್ನನ್ನು ಹಿಂಬಾಲಿಸಿ ಬನ್ನಿ; ಸರ್ವೇಶ್ವರ ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೊಪ್ಪಿಸಿದ್ದಾರೆ,” ಎಂದನು. ಅಂತೆಯೇ ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲ ಹಿಡಿದುಕೊಂಡು ಯಾರನ್ನೂ ದಾಟಗೊಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ, “ನೀವು ನನ್ನ ಹಿಂದೆ ಬನ್ನಿರಿ. ಏಕೆಂದರೆ ಯೆಹೋವ ದೇವರು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು. ಅವರು ಅವನ ಹಿಂದೆ ಬಂದು, ಮೋವಾಬ್ಯರಿಗೆ ಎದುರಾದ ಯೊರ್ದನ್ ನದಿ ರೇವುಗಳನ್ನು ಹಿಡಿದು, ಒಬ್ಬರನ್ನಾದರೂ ದಾಟಗೊಡದೆ,