Judges 3:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಹೂದನು ಇಸ್ರೇಲರನ್ನು ರಕ್ಷಿಸಿದ ತರುವಾಯ, ಇನ್ನೊಬ್ಬ ವ್ಯಕ್ತಿಯು ಇಸ್ರೇಲರನ್ನು ರಕ್ಷಿಸಿದನು. ಅವನು ಅನಾತನ5 ಮಗನಾದ ಶಮ್ಗರ. ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.
Kannada BSI Bible 2016
ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಹತಮಾಡಿ ಇಸ್ರಾಯೇಲ್ಯರನ್ನು ರಕ್ಷಿಸಿದನು.
Kannada Bible (KNCL) BSI 2016
ಏಹೂದನ ಬಳಿಕ ಅನಾತನ ಮಗ ಶಮ್ಗರನು ಮುಂದೆಬಂದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಯೇಲರನ್ನು ಕಾಪಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಹೂದನ ತರುವಾಯ ಅನಾತನ ಮಗ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರುನೂರು ಜನರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲರನ್ನು ರಕ್ಷಿಸಿದನು.