Judges 3:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಆಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.
Kannada BSI Bible 2016
ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.
Kannada Bible (KNCL) BSI 2016
ಇಸ್ರಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಅವರ ದೃಷ್ಟಿಯಲ್ಲಿ ದ್ರೋಹಿಗಳಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತು, ಬಾಳನನ್ನೂ ಅಶೇರನನ್ನೂ ಸೇವಿಸಿದರು.