Judges 3:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರ ಮೇಲೆ ಯೆಹೋವನು ಕೋಪಿಸಿಕೊಂಡಿದ್ದನು. ಹರೇಮ್‌ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನು ಅವರನ್ನು ಸೋಲಿಸುವುದಕ್ಕೂ ಆಳುವುದಕ್ಕೂ ಯೆಹೋವನು ಆಸ್ಪದ ಕೊಟ್ಟನು. ಇಸ್ರೇಲಿನ ಜನರು ಎಂಟು ವರ್ಷ ಆ ಅರಸನ ಅಧೀನದಲ್ಲಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.
Kannada BSI Bible 2016
ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್‌ ರಿಷಾತಯಿಮ್‌ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್‌ ಮಕ್ಕಳು ಕೂಷನ್‌ರಿಷಾತಯಿಮ್‌ನ್ನು ಎಂಟು ವರುಷ ಸೇವಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟನು. ಅವರು ಎಂಟು ವರುಷಗಳವರೆಗೆ ಅವನಿಗೆ ದಾಸರಾಗಿದ್ದರು.
Kannada Bible (KNCL) BSI 2016
ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡು, ಅವರನ್ನು ಅರಾಮ್ ನಹರೈಮ್‌ದ ಅರಸನಾದ ಕೂಷನ್ ರಿಷಾತಯಿಮನ ಕೈಗೆ ಮಾರಿಬಿಟ್ಟರು. ಇಸ್ರಾಯೇಲರು ಕೂಷನ್‌ರಿಷಾತಯಿಮ್ ಎಂಬವನಿಗೆ ಎಂಟು ವರ್ಷ ಗುಲಾಮರಾಗಿದ್ದರು.