Judges 4:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆದೆಷ್ ನಗರದಲ್ಲಿ ಬಾರಾಕನು ಜೆಬುಲೂನ್ ಮತ್ತು ನಫ್ತಾಲಿ ಕುಲದವರನ್ನು ಒಟ್ಟಿಗೆ ಸೇರಿಸಿ ಆ ಕುಲಗಳಿಂದ ಹತ್ತು ಸಾವಿರ ಜನರನ್ನು ತನ್ನೊಂದಿಗೆ ಬರುವಂತೆ ಮಾಡಿದನು. ದೆಬೋರಳು ಸಹ ಬಾರಾಕನ ಸಂಗಡ ಹೋದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಯಿಸಿದನು. ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು, ದೆಬೋರಳೂ ಅವರೊಂದಿಗೆ ಹೋದಳು.
Kannada BSI Bible 2016
ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಬಾರಾಕನು ಜೆಬೂಲೂನ್ಯರನ್ನೂ ನಫ್ತಾಲ್ಯರನ್ನೂ ಕೆದೆಷಿಗೆ ಕರಿಸಿದನು; ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು; ದೆಬೋರಳೂ ಹೋದಳು.
Kannada Bible (KNCL) BSI 2016
ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಸಿದನು. ಅವರಲ್ಲಿ ಹತ್ತುಸಾವಿರ ಮಂದಿ ಅವನ ಹೆಜ್ಜೆಹಿಡಿದು ಯುದ್ಧಕ್ಕೆ ಹೋದರು. ದೆಬೋರಳೂ ಹೋದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾರಾಕನು ಜೆಬುಲೂನನ್ನೂ, ನಫ್ತಾಲಿಯನ್ನೂ ಕೆದೆಷಿಗೆ ಕರೆದನು. ಅವನು ಹತ್ತು ಸಾವಿರ ಜನರಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.