Judges 4:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆಬೆರನೆಂಬ ಒಬ್ಬ ಮನುಷ್ಯನಿದ್ದನು. ಅವನು ಕೇನ್ಯರ ಕುಲದವನಾಗಿದ್ದನು. ಅವನು ಉಳಿದ ಕೇನ್ಯರನ್ನು ಬಿಟ್ಟು ಚಾನನ್ನೀಮ್ ಎಂಬ ಊರಲ್ಲಿ ಓಕ್ ವೃಕ್ಷದ ಬಳಿ ಮನೆ ಮಾಡಿಕೊಂಡಿದ್ದನು. (ಕೇನ್ಯರು ಹೋಬಾಬನ ಸಂತತಿಯವರಾಗಿದ್ದರು. ಹೋಬಾಬನು ಮೋಶೆಯ ಮಾವನಾಗಿದ್ದನು.) ಚಾನನ್ನೀಮ್ ಕೆದೆಷ್ ನಗರದ ಸಮೀಪದಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
(ಕೇನ್ಯನಾದ) ಹೆಬೆರನು ಉಳಿದ ಕೇನ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಕೇನ್ಯರು ಮೋಶೆಯ ಮಾವನಾದ ಹೋಬಾಬನ ವಂಶದವರು. ಹೆಬೆರನು ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದ ವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.
Kannada BSI Bible 2016
ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
(ಕೇನ್ಯನಾದ ಹೆಬೆರನು ಮೋಶೆಯ ಮಾವನಾದ ಹೋಬಾಬನ ವಂಶದ ಉಳಿದ ಕೇನ್ಯರನ್ನು ಅಗಲಿ ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರಹಾಕಿಕೊಂಡಿದ್ದನು.)
Kannada Bible (KNCL) BSI 2016
ಕೇನ್ಯನಾದ ಹೆಬೆರನು ಮೋಶೆಯ ಮಾವ ಹೋಬಾಬನ ವಂಶದ ಉಳಿದ ಕೇನ್ಯರನ್ನು ಬಿಟ್ಟು ಕೆದೆಷಿನ ಹತ್ತಿರ ಇರುವ ‘ಚಾನನ್ನೀಮ್’ ಎಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯ ಅಳಿಯನಾದ ಹೊಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರನು ಕೇನ್ಯರನ್ನು ಬಿಟ್ಟು, ತನ್ನನ್ನು ಪ್ರತ್ಯೇಕಿಸಿ, ಕೆದೆಷಿನ ಬಳಿಯಲ್ಲಿರುವ ಚಾನನ್ನೀಮ್ ಎಂಬ ಊರಲ್ಲಿ ಅಲ್ಲೋನ್ ಮರದ ಬಳಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.