Judges 4:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದೆಬೋರಳು ಬಾರಾಕನಿಗೆ, “ಈ ದಿನ ಯೆಹೋವನು ಸೀಸೆರನನ್ನು ಸೋಲಿಸಲು ನಿನಗೆ ಸಹಾಯ ಮಾಡುತ್ತಾನೆ. ಯೆಹೋವನು ನಿನಗಾಗಿ ದಾರಿಯನ್ನು ಸುಗಮಗೊಳಿಸಿದ್ದಾನೆಂಬುದು ನಿನಗೆ ಖಚಿತವಾಗಿ ಗೊತ್ತಿದೆ” ಎಂದು ಹೇಳಿದಳು. ಆದ್ದರಿಂದ ಬಾರಾಕನು ಹತ್ತು ಸಾವಿರ ಜನರೊಂದಿಗೆ ತಾಬೋರ್ ಬೆಟ್ಟದಿಂದ ಇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದೆಬೋರಳು ಬಾರಾಕನಿಗೆ, “ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು” ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು.
Kannada BSI Bible 2016
ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್‌ ಬೆಟ್ಟ ದಿಂದ ಇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೆಬೋರಳು ಬಾರಾಕನಿಗೆ - ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇದೇ; ನಿಶ್ಚಯವಾಗಿ ಆತನು ತಾನೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವನು ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದಿಳಿದನು.
Kannada Bible (KNCL) BSI 2016
ಆಗ ದೆಬೋರಳು ಬಾರಾಕನಿಗೆ, “ಏಳು, ಸರ್ವೇಶ್ವರ ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನ ಇದೇ; ನಿಶ್ಚಯವಾಗಿ ಅವರು ತಾವೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವರು,” ಎಂದಳು. ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತ ತಾಬೋರ್ ಬೆಟ್ಟದಿಂದಿಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೆಬೋರಳು ಬಾರಾಕನಿಗೆ, “ನೀನು ಏಳು. ಏಕೆಂದರೆ ಯೆಹೋವ ದೇವರು ಸೀಸೆರನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವ ದಿನವು ಇದೇ. ಯೆಹೋವ ದೇವರು ನಿನ್ನ ಮುಂದೆ ಹೊರಡಲಿಲ್ಲವೋ?” ಎಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು, ತಾಬೋರ್ ಬೆಟ್ಟದಿಂದ ಇಳಿದನು.