Judges 4:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸೀಸೆರನು ಓಡಿಹೋದನು. ಅವನು ಯಾಯೇಲ ಎಂಬ ಒಬ್ಬ ಮಹಿಳೆ ವಾಸವಾಗಿದ್ದ ಗುಡಾರಕ್ಕೆ ಬಂದನು. ಯಾಯೇಲಳು ಹೆಬೆರನ ಹೆಂಡತಿ. ಹೆಬೆರನು ಕೇನ್ಯನಾಗಿದ್ದನು. ಹಾಚೋರಿನ ಅರಸನಾದ ಯಾಬೀನ ಮತ್ತು ಕೇನ್ಯನಾದ ಹೆಬೆರನ ಕುಟುಂಬಗಳ ಮಧ್ಯೆ ಒಳ್ಳೆಯ ಸಮಾಧಾನವಿದ್ದಿತು. ಅದಕ್ಕಾಗಿ ಸೀಸೆರನು ಯಾಯೇಲಳ ಗುಡಾರಕ್ಕೆ ಓಡಿಹೋಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದುದರಿಂದ ಸೀಸೆರನು ಕಾಲುನಡಿಗೆಯಿಂದ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳ ಗುಡಾರದ ಕಡೆಗೆ ಹೋದನು.
Kannada BSI Bible 2016
ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.
Kannada Bible (KNCL) BSI 2016
ಹಾಚೋರಿನ ಅರಸ ಯೂಬೀನನಿಗೂ ಕೇನ್ಯನದ ಹೆಬೆರನ ಮನೆಯವರಿಗೂ ಸಮಾಧಾನ ಇದ್ದುದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಏಕೆಂದರೆ ಯಾಬೀನನೆಂಬ ಹಾಚೋರಿನ ಅರಸನಿಗೂ, ಕೇನ್ಯನಾದ ಹೆಬೆರನ ಮನೆಗೂ ನಡುವೆ ಶಾಂತಿ ಇತ್ತು.