Judges 4:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೀಸೆರನು ಬರುವುದನ್ನು ಯಾಯೇಲಳು ಕಂಡಳು. ಆದ್ದರಿಂದ ಅವನನ್ನು ಬರಮಾಡಿಕೊಳ್ಳಲು ಹೊರಗೆ ಬಂದಳು. ಯಾಯೇಲಳು ಸೀಸೆರನಿಗೆ, “ಸ್ವಾಮೀ, ನನ್ನ ಗುಡಾರದೊಳಗೆ ಬನ್ನಿ, ಭಯಪಡಬೇಡಿ” ಎಂದು ಕರೆದಳು. ಆದ್ದರಿಂದ ಸೀಸೆರನು ಗುಡಾರದೊಳಗೆ ಹೋದನು. ಅವಳು ಸೀಸೆರನ ಮೇಲೆ ಕಂಬಳಿಯನ್ನು ಹೊದಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿಗೆ ಬನ್ನಿರಿ” ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು.
Kannada BSI Bible 2016
ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ - ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿ ಬನ್ನಿರಿ ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು.
Kannada Bible (KNCL) BSI 2016
ಯಾಯೇಲಳು ಹೊರಗೆಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಒಡೆಯಾ, ಒಳಗೆ ಬನ್ನಿ; ಹೆದರಬೇಡಿ, ನಮ್ಮಲ್ಲಿಗೆ ಬನ್ನಿ,” ಎನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆ ಅವನನ್ನು ಕಂಬಳಿಯಿಂದ ಮುಚ್ಚಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಒಳಗೆ ಬಾ, ನನ್ನ ಪ್ರಭುವೇ, ನಮ್ಮ ಬಳಿಗೆ ಬಾ, ಭಯಪಡಬೇಡ,” ಎಂದು ಹೇಳಿದಳು. ಅವನನ್ನು ಒಂದು ಕಂಬಳಿಯಿಂದ ಮುಚ್ಚಿದಳು.