Judges 4:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೀಸೆರನು ಯಾಯೇಲಳಿಗೆ, “ನನಗೆ ಬಾಯಾರಿಕೆಯಾಗಿದೆ. ದಯವಿಟ್ಟು ಕುಡಿಯಲು ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು. ಯಾಯೇಲಳ ಬಳಿ ಪ್ರಾಣಿಗಳ ಚರ್ಮದಿಂದ ಮಾಡಿದ ಒಂದು ಚೀಲವಿತ್ತು. ಆಕೆಯು ಅದರಲ್ಲಿ ಹಾಲಿಟ್ಟಿದ್ದಳು. ಯಾಯೇಲಳು ಸೀಸೆರನಿಗೆ ಒಂದು ಗುಟುಕು ಹಾಲನ್ನೇ ಕೊಟ್ಟಳು. ನಂತರ ಅವಳು ಸೀಸೆರನನ್ನು ಮುಚ್ಚಿಬಿಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆಕೆಗೆ, “ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ಬಾಯಾರಿಕೆಯಾಗಿದೆ” ಅಂದನು. ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಲು ಕೊಟ್ಟು ಅವನನ್ನು ಪುನಃ ಮುಚ್ಚಿದಳು.
Kannada BSI Bible 2016
ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆಕೆಗೆ - ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ದಾಹವಾಗಿದೆ ಅಂದನು;
Kannada Bible (KNCL) BSI 2016
ಅವನು ಆಕೆಗೆ, “ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ದಾಹವಾಗಿದೆ,” ಎಂದನು. ಆಕೆ ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಕೊಟ್ಟು ಅವನನ್ನು ಮತ್ತೆ ಮುಚ್ಚಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೀಸೆರನು ಅವಳಿಗೆ, “ದಯಮಾಡಿ, ನನಗೆ ಕುಡಿಯುವುದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ,” ಎಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು, ಅವನಿಗೆ ಕುಡಿಯುವುದಕ್ಕೆ ಕೊಟ್ಟು, ಅವನನ್ನು ಮುಚ್ಚಿದಳು.