Judges 4:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಇಸ್ರೇಲರನ್ನು ಸೋಲಿಸುವಂತೆ ಯೆಹೋವನು ಅವಕಾಶ ಮಾಡಿದನು. ಯಾಬೀನನು ಹಾಚೋರ್ ಎಂಬ ನಗರದಲ್ಲಿ ಆಳುತ್ತಿದ್ದನು. ಸೀಸೆರ ಎಂಬವನು ಅವನ ಸೇನಾಧಿಪತಿಯಾಗಿದ್ದನು. ಸೀಸೆರನು ಹರೋಷೆತ್ ಹಗ್ಗೋಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ಒಪ್ಪಿಸಿಕೊಟ್ಟನು. ಹರೋಷೆತ್ ಹಗೊಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಧಿಪತಿಯಾಗಿದ್ದನು.
Kannada BSI Bible 2016
ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯರಾಜನಾದ ಯಾಬೀನನಿಗೆ ಮಾರಿಬಿಟ್ಟನು. ಮ್ಲೇಚ್ಫರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿಯಾಗಿದ್ದನು.
Kannada Bible (KNCL) BSI 2016
ಈ ಕಾರಣ ಸರ್ವೇಶ್ವರ ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ವಶಪಡಿಸಿದರು. ಮ್ಲೇಚ್ಛರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿ ಆಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟರು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತ್ ಹಗ್ಗೊಯಿಮ್‌ನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.