Judges 4:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೇ ಕ್ಷಣದಲ್ಲಿ ಬಾರಾಕನು ಯಾಯೇಲಳ ಗುಡಾರದ ಹತ್ತಿರಕ್ಕೆ ಬಂದನು. ಅವನನ್ನು ಬರಮಾಡಿಕೊಳ್ಳುವುದಕ್ಕಾಗಿ ಯಾಯೇಲಳು ಹೊರಗೆ ಬಂದು, “ಇಲ್ಲಿ ಒಳಗೆ ಬನ್ನಿ. ನಾನು, ನೀವು ಹುಡುಕುತ್ತಿರುವ ಮನುಷ್ಯನನ್ನು ತೋರಿಸುತ್ತೇನೆ” ಎಂದಳು. ಬಾರಾಕನು ಯಾಯೇಲಳ ಜೊತೆ ಗುಡಾರವನ್ನು ಪ್ರವೇಶಿಸಿದನು. ಅಲ್ಲಿ ಬಾರಾಕನು ಕಣತಲೆಯಲ್ಲಿ ಗೂಟವನ್ನು ಜಡಿಸಿಕೊಂಡು ನೆಲದ ಮೇಲೆ ಸತ್ತು ಬಿದ್ದಿದ್ದ ಸೀಸೆರನನ್ನು ಕಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, “ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ” ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ಕಣ್ತಲೆಯಲ್ಲಿ ಗೂಟವು ಜಡಿದಿತ್ತು.
Kannada BSI Bible 2016
ಇಗೋ, ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವದಕ್ಕೆ ಹೊರಟುಹೋಗಿ ಅವನಿಗೆ--ಬಾ; ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು ಎಂದು ಹೇಳಿದಳು. ಅವನು ಅವಳ ಬಳಿಗೆ ಬಂದಾಗ ಇಗೋ, ಸೀಸೆರನು ಸತ್ತು ಬಿದ್ದಿದ್ದನು; ಮೊಳೆಯು ಅವನ ಕಣತಲೆಯಲ್ಲಿ ಹೊಡೆದಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು - ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ತಲೆಯಲ್ಲಿ ಗೂಟವು ಜಡಿಯಲ್ಪಟ್ಟಿತ್ತು.
Kannada Bible (KNCL) BSI 2016
ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, “ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ,” ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತುಬಿದ್ದದ್ದನ್ನು ಕಂಡನು. ಅವನ ತಲೆಯಲ್ಲಿ ಗೂಟವು ಜಡಿದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವುದಕ್ಕೆ ಹೊರಟುಹೋಗಿ ಅವನಿಗೆ, “ಬಾ, ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು,” ಎಂದು ಹೇಳಿದಳು. ಬಾರಾಕನು ಅವಳ ಬಳಿಗೆ ಬಂದಾಗ, ಸೀಸೆರನು ಮರಣಹೊಂದಿದ್ದನು. ಮೊಳೆಯು ಅವನ ತಲೆಯಲ್ಲಿ ಹೊಡೆದಿತ್ತು.