Judges 4:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೀಸೆರನ ಹತ್ತಿರ ಒಂಭೈನೂರು ಕಬ್ಬಿಣದ ರಥಗಳಿದ್ದವು. ಅವನು ಇಪ್ಪತ್ತು ವರ್ಷಗಳ ಕಾಲ ಇಸ್ರೇಲರನ್ನು ತುಂಬ ಬಾಧಿಸಿದನು. ಆದ್ದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಲ್ಲಿ ಮೊರೆಯಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.
Kannada BSI Bible 2016
ಆಗ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್‌ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷಗಳ ತನಕ ಬಲವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.
Kannada Bible (KNCL) BSI 2016
ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲರು ಯೆಹೋವ ದೇವರಿಗೆ ಮೊರೆಯಿಟ್ಟರು. ಅವನಿಗೆ ಒಂಬೈನೂರು ಕಬ್ಬಿಣದ ರಥಗಳಿದ್ದವು. ಅವನು ಇಸ್ರಾಯೇಲರನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.