Judges 4:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ದಿನ, ಆಕೆ ದೆಬೋರಳ ಖರ್ಜೂರದ ಮರವೆಂದು ಪ್ರಸಿದ್ಧವಾದ ಮರದ ಕೆಳಗೆ ಕುಳಿತಿದ್ದಳು. ಆಗ ಇಸ್ರೇಲಿನ ಜನರು ಆಕೆಯ ಹತ್ತಿರ ಬಂದು, “ಸೀಸೆರನ ಬಗ್ಗೆ ಏನು ಮಾಡಬೇಕು?” ಎಂದು ಕೇಳಿದರು. ದೆಬೋರಳ ಖರ್ಜೂರಮರವು ಎಫ್ರಾಯೀಮ್ ಬೆಟ್ಟಪ್ರದೇಶದ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.
Kannada BSI Bible 2016
ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುವಲ್ಲಿ ಇಸ್ರಾಯೇಲ್ಯರು ನ್ಯಾಯ ನಿರ್ಣಯಕ್ಕೋಸ್ಕರ ಆಕೆಯ ಬಳಿಗೆ ಬರುತ್ತಿದ್ದರು.
Kannada Bible (KNCL) BSI 2016
ಆಕೆ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ‘ದೆಬೋರಳ ಖರ್ಜೂರ ವೃಕ್ಷ’ವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುತ್ತಿದ್ದಳು. ಇಸ್ರಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೆಬೋರಳು ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಎಫ್ರಾಯೀಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸುತ್ತಿದ್ದಳು. ಇಸ್ರಾಯೇಲರು ಅವಳ ಬಳಿಗೆ ನ್ಯಾಯಕ್ಕಾಗಿ ಬರುತ್ತಿದ್ದರು.