Judges 4:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ದೆಬೋರಳು, “ನಿಸ್ಸಂದೇಹವಾಗಿ ನಾನು ನಿನ್ನೊಂದಿಗೆ ಬರುತ್ತೇನೆ. ಆದರೆ ನಿನ್ನ ಈ ಮನೋಭಾವದಿಂದಾಗಿ ಸೀಸೆರನನ್ನು ಸೋಲಿಸಿದ ಗೌರವ ನಿನಗೆ ಸಲ್ಲುವುದಿಲ್ಲ. ಒಬ್ಬ ಹೆಂಗಸು ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ” ಎಂದು ಉತ್ತರಿಸಿದಳು. ದೆಬೋರಳು ಬಾರಾಕನ ಸಂಗಡ ಕೆದೆಷ್ ನಗರಕ್ಕೆ ಹೋದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲಿ ಉಂಟಾಗುವ ಗೌರವ ನಿನಗೆ ಸಲ್ಲುವುದಿಲ್ಲ. ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು” ಎಂದು ಹೇಳಿ ದೆಬೋರಳು ಬಾರಾಕನೊಡನೆ ಕೆದೆಷಿಗೆ ಹೋದಳು.
Kannada BSI Bible 2016
ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು - ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲುಂಟಾಗುವ ಮಾನವು ನಿನಗಲ್ಲ. ಯೆಹೋವನು ಸೀಸೆರನನ್ನು ಒಬ್ಬ ಸ್ತ್ರೀಗೆ ಒಪ್ಪಿಸಿಕೊಡುವನು ಎಂದು ಹೇಳಿ ಎದ್ದು ಬಾರಾಕನೊಡನೆ ಕೆದೆಷಿಗೆ ಹೋದಳು.
Kannada Bible (KNCL) BSI 2016
ಆಕೆ, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧದಿಂದ ನಿನಗೆ ಗೌರವಗಿಟ್ಟದು; ಏಕೆಂದರೆ ಸರ್ವೇಶ್ವರ ಸೀಸೆರನನ್ನು ಒಬ್ಬ ಮಹಿಳೆಗೆ ಒಪ್ಪಿಸಿಕೊಡುವರು,” ಎಂದು ಹೇಳಿ ಬಾರಾಕನೊಡನೆ ಕೆದೆಷಿಗೆ ಹೋದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವಳು, “ನಾನು ನಿನ್ನ ಸಂಗಡ ಖಂಡಿತವಾಗಿ ಬರುವೆನು. ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನತೆ ನಿನ್ನದಾಗಿರುವುದಿಲ್ಲ. ಏಕೆಂದರೆ ಯೆಹೋವ ದೇವರು ಸೀಸೆರನನ್ನು ಒಬ್ಬ ಸ್ತ್ರೀಯ ಕೈಗೆ ಒಪ್ಪಿಸಿಬಿಡುವೆನು,” ಎಂದು ಹೇಳಿದಳು. ದೆಬೋರಳು ಎದ್ದು ಬಾರಾಕನ ಸಂಗಡ ಕೆದೆಷಿಗೆ ಹೋದಳು.