Judges 5:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾನಾನ್ಯ ಅರಸರು ಬಂದು ಯುದ್ಧಮಾಡಿದರು; ಅವರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಹೋರಾಡಿದರು. ಆದರೆ ಅವರು ಯಾವ ಸಂಪತ್ತನ್ನು ತೆಗೆದುಕೊಂಡು ಹೋಗಲಿಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅರಸರು ಬಂದು ಯುದ್ಧಮಾಡಿದರು; ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.
Kannada BSI Bible 2016
ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸರು ಬಂದು ಯುದ್ಧಮಾಡಿದರು; ಕಾನಾನ್ಯರಾಜರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಕಾದಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.
Kannada Bible (KNCL) BSI 2016
ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸಮೀಪವಾದ ತಾನಕದಲ್ಲಿ ಯುದ್ಧಮಾಡಿದರು. ಅವರು ಬೆಳ್ಳಿ ದ್ರವ್ಯಗಳನ್ನು ತೆಗೆದುಕೊಳ್ಳಲಿಲ್ಲ.