Judges 5:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯಾಯೇಲಳು ಕೈಚಾಚಿ ಗುಡಾರದ ಗೂಟವನ್ನು ತೆಗೆದುಕೊಂಡಳು. ಅವಳು ಬಲಗೈಯನ್ನು ಚಾಚಿ ದೊಡ್ಡ ಕೊಡತಿಯನ್ನು ತೆಗೆದುಕೊಂಡಳು, ಆ ಕೊಡತಿಯಿಂದ ಸೀಸೆರನ ತಲೆಯನ್ನು ಬಿರುಸಾಗಿ ಒಡೆದುಬಿಟ್ಟಳು; ಅವನ ಕಣತಲೆಗೆ ತಿವಿದು ಬಡಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೈಚಾಚಿ ಗೂಟವನ್ನು ತೆಗೆದುಕೊಂಡಳು; ಬಲಗೈಯಲ್ಲಿ ದೊಡ್ಡ ಸುತ್ತಿಗೆಯನ್ನು ಹಿಡಿದಳು; ಆ ಸುತ್ತಿಗೆಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. ಅವನ ನೆತ್ತಿಗೆ ತಿವಿದು ಜಡಿದಳು.
Kannada BSI Bible 2016
ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೈಚಾಚಿ ಗೂಟವನ್ನು ತೆಗೆದುಕೊಂಡಳು; ಬಲಗೈಯಲ್ಲಿ ದೊಡ್ಡ ಕೊಡತಿಯನ್ನು ಹಿಡಿದಳು; ಆ ಕೊಡತಿಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. ಅವನ ಕಣತಲೆಗೆ ತಿವಿದು ಬಡಿದಳು.
Kannada Bible (KNCL) BSI 2016
ಗೂಟ ತೆಗೆದುಕೊಂಡಳು ಕೈಚಾಚಿ ಹಿಡಿದಳು ಬಲಗೈಯಲಿ ದೊಡ್ಡಕೊಡತಿ ಜಡಿದಳು ಸೀಸೆರನ ತಲೆಯನು ಬಡಿದಳಾ ಕೊಡತಿಯಿಂದ ಕಣತಲೆಗೇ ತಿವಿದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಕೈಯಲ್ಲಿ ಮೊಳೆಯನ್ನೂ, ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆಯನ್ನೂ ತೆಗೆದುಕೊಂಡಳು. ಸುತ್ತಿಗೆಯಿಂದ ಸೀಸೆರನನ್ನು ಅವಳು ಹೊಡೆದಳು. ಅವಳು ಅವನ ತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.