Judges 5:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಯಾಯೇಲಳ ಪಾದಗಳ ಬಳಿಯಲ್ಲಿ ಬಗ್ಗಿಕೊಂಡು ಉರುಳಿಬಿದ್ದನು; ಅವನು ಅವಳ ಪಾದಗಳ ಬಳಿಯಲ್ಲಿ ಕುಸಿದುಬಿದ್ದನು. ಸೀಸೆರನು ಕುಸಿದುಬಿದ್ದಲ್ಲಿಯೇ ಸತ್ತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು; ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು.
Kannada BSI Bible 2016
ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆಕೆಯ ಕಾಲುಗಳ ಬಳಿಯಲ್ಲಿ ಬೊಗ್ಗಿಕೊಂಡು ಉರುಳಿ ಬಿದ್ದನು; ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು.
Kannada Bible (KNCL) BSI 2016
ಬೊಗ್ಗಿಬಿದ್ದನು, ಉರುಳಿಬಿದ್ದನು, ಮುದುರಿಬಿದ್ದನವನು ಅವಳ ಕಾಲುಗಳ ಬಳಿ ಅಲ್ಲೆ ಸತ್ತುಬಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳ ಕಾಲುಗಳ ಹತ್ತಿರ ಮುದುರಿ ಬಿದ್ದು ಮಲಗಿದನು. ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು. ಎಲ್ಲಿ ಬಾಗಿ ಬಿದ್ದನೋ, ಅಲ್ಲಿಯೇ ಬಿದ್ದು ಮರಣಹೊಂದಿದನು.