Judges 5:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸೀಸೆರನ ತಾಯಿ ಕಿಟಿಕಿಯ ಮೂಲಕ ನೋಡಿದಳು; ಆಕೆಯು ತೆರೆಯ ಮೂಲಕ ನೋಡಿ ಕೂಗಿದಳು. ‘ಸೀಸೆರನ ರಥಾಗಮನಕ್ಕೆ ಇಷ್ಟು ತಡವೇಕೆ? ಅವನ ರಥದ ಕುದುರೆಗಳ ಧ್ವನಿ ಬರಲು ಇಷ್ಟು ತಡವೇಕೆ?’ ಅಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು.
Kannada BSI Bible 2016
ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ಅವನ ರಥವು ಬರುವದಕ್ಕೆ ಇಷ್ಟು ಹೊತ್ತೇಕಾಯಿತು! ಅವನ ಕುದುರೆಗಳ ಕಾಲುಗಳಿಗೆ ಇಷ್ಟು ಸಾವಕಾಶವೇಕೆ ಅಂದಳು.
Kannada Bible (KNCL) BSI 2016
ಸೀಸೆರನ ತಾಯಿ ಇಣುಕಿ ನೋಡಿದಳು ಕಿಟಕಿಯಿಂದ ಕೂಗಿದಳು ಆ ಕಿಟಕಿಯ ಜಾಲರಿಗಳಿಂದ; ‘ಇಷ್ಟು ಹೊತ್ತಾಗಬೇಕೆ ರಥ ಬರುವುದಕ್ಕೆ? ಕುದುರೆಗಳ ಕಾಲುಗಳಿಗೆ ಇಷ್ಟು ಸಾವಕಾಶವೇಕೆ?’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿಯಿಂದ ಕೂಗಿದಳು, ‘ಅವನ ರಥವು ಬರುವುದಕ್ಕೆ ಇಷ್ಟು ತಡವಾದದ್ದೇನು? ಅವನ ರಥಗಳ ಗಾಲಿಗಳು ಹಿಂದುಳಿದಿರುವುದೇನು?’
Recommended Reading