Judges 5:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಖಂಡಿತವಾಗಿ ಅವರು ಗೆದ್ದಿದ್ದಾರೆ, ತಾವು ಸೋಲಿಸಿದ ಜನರಿಂದ ವಸ್ತುಗಳನ್ನು ಪಡೆಯುತ್ತಿದ್ದಾರೆ! ಆ ವಸ್ತುಗಳನ್ನು ತಮ್ಮಲ್ಲಿಯೇ ಹಂಚಿಕೊಳ್ಳುತ್ತಿದ್ದಾರೆ! ಪ್ರತಿಯೊಬ್ಬ ಸೈನಿಕನು ಒಬ್ಬಿಬ್ಬರು ಹುಡುಗಿಯರನ್ನು ತೆಗೆದುಕೊಳ್ಳುತ್ತಿರಬೇಕು. ಸೀಸೆರನು ವರ್ಣರಂಜಿತ ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು. ಹೌದು! ವಿಜಯಿ ಸೀಸೆರನು ಧರಿಸಲು ಬಣ್ಣಬಣ್ಣದ ಒಂದು ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು; ಅಥವಾ ಎರಡು ಬಟ್ಟೆಗಳನ್ನು ತೆಗೆದುಕೊಳ್ಳುತ್ತಿರಬಹುದು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ?. ಪ್ರತಿಯೊಬ್ಬ ಪುರುಷನಿಗೆ ಒಬ್ಬಿಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, ಕಂಠಮಾಲೆಯೂ ದೊರಕಿರುತ್ತವೆ.’
Kannada BSI Bible 2016
ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಶ್ಚಯವಾಗಿ ಅವರಿಗೆ ಕೊಳ್ಳೆಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬ ಸೈನಿಕನಿಗೆ ಒಬ್ಬಿಬ್ಬರು ದಾಸಿಯರೂ ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ ವಿಚಿತ್ರವಾಗಿ ಕಸೂತಿಹಾಕಿದ ಒಂದೆರಡು ವಸ್ತ್ರಗಳೂ ಕಂಠಮಾಲೆಯೂ ದೊರಕಿರುತ್ತವೆ ಎಂಬದೇ.
Kannada Bible (KNCL) BSI 2016
‘ನಿಶ್ಚಯವಾಗಿ ಸಿಕ್ಕಿರಬೇಕು ಅವರಿಗೆ ಕೊಳ್ಳೆ ಹಂಚಿಕೊಳ್ಳುತ್ತಿರಬೇಕು ಅದನು ತಮ್ಮತಮ್ಮಲ್ಲೆ ಪ್ರತಿಯೊಬ್ಬ ಸೈನಿಕನಿಗೆ ಒಬ್ಬೊಬ್ಬ ದಾಸಿಯರು ಸೀಸೆರನಿಗೊ, ಬಣ್ಣಬಣ್ಣವಾದ ಬಟ್ಟೆಬರೆಗಳು ವಿಚಿತ್ರ ಕಸೂತಿಹಾಕಿದ ಒಂದೆರಡು ವಸ್ತ್ರಗಳು, ಕಂಠಮಾಲೆಗಳು’.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಅವರು ಓಡಲಿಲ್ಲವೋ? ಕೊಳ್ಳೆ ಹಂಚಿಕೊಳ್ಳಲಿಲ್ಲವೋ? ಒಬ್ಬೊಬ್ಬ ಸೈನಿಕನಿಗೆ ಒಂದೆರಡು ದಾಸಿಯರು ಸೀಸೆರನಿಗಾದರೋ ನಾನಾ ವರ್ಣವುಳ್ಳ ಬಟ್ಟೆಗಳು. ನಾನಾ ವರ್ಣವುಳ್ಳ ವಿಚಿತ್ರವಾಗಿ ಕಸೂತಿಹಾಕಿದ ಬಟ್ಟೆಗಳು, ವಿಚಿತ್ರವಾಗಿ ಕಸೂತಿಹಾಕಿದ ಒಂದೆರಡು ಬಟ್ಟೆಗಳೂ ಕೊಳ್ಳೆ ಹಿಡಿಯುವವರಿಗೆ ತಕ್ಕಂಥ ಕಂಠಮಾಲೆಗಳೂ ಸಿಕ್ಕಲಿಲ್ಲವೋ?’