Judges 5:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ! ನಲವತ್ತು ವರ್ಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.
Kannada BSI Bible 2016
ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಎಲ್ಲಾ ಶತ್ರುಗಳೂ ಇವರಂತೆಯೇ ನಾಶವಾಗಲಿ; ಆತನ ಭಕ್ತರು ಪ್ರತಾಪದಿಂದ ಉದಯಿಸುವ ಸೂರ್ಯನಂತಿರಲಿ. ದೇಶದಲ್ಲಿ ನಾಲ್ವತ್ತು ವರುಷ ಸಮಾಧಾನವಿತ್ತು.
Kannada Bible (KNCL) BSI 2016
ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. ಆದರೆ ಅವರನ್ನು ಪ್ರೀತಿ ಮಾಡುವವರು ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು.