Judges 5:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನೇ, ನೀನು ಹಿಂದೆ ಸೆಯೀರಿನ ಪ್ರದೇಶದಿಂದ ಬಂದೆ. ನೀನು ಎದೋಮ್ಯರ ಪ್ರದೇಶದಿಂದ ನಡೆದುಕೊಂಡು ಹೋದೆ. ನೀನು ನಡೆಯುವಾಗ ಭೂಮಿ ನಡುಗಿತು; ಆಕಾಶ ಹನಿಗರೆಯಿತು. ಮೇಘಮಂಡಲವು ಮಳೆಗರೆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗರೆಯಿತು.
Kannada BSI Bible 2016
ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶದಿಂದ ಹನಿ ಬಿದ್ದಿತು; ಮೇಘಮಂಡಲವು ಮಳೆಗರೆಯಿತು.
Kannada Bible (KNCL) BSI 2016
ಎದೋಮ್ಯರ ಪ್ರಾಂತ್ಯದಿಂದ, ಸೇಯೀರ ಗುಡ್ಡದಿಂದ ಹೇ ಸರ್ವೇಶ್ವರಾ, ನೀ ಹೊರಟು ಬರುವಾಗ ಕಂಪಿಸಿತು ಭೂಮಿ, ಹನಿಗರೆಯಿತು ಆಗಸ ಮಳೆಸುರಿಸಿತು ಮೇಘಮಂಡಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರೇ, ನೀವು ಸೇಯೀರಿನಿಂದ ಹೊರಟು, ಎದೋಮಿನ ಹೊಲದಿಂದ ಮುನ್ನಡೆಯುವಾಗ, ಭೂಮಿ ನಡುಗಿತು. ಆಕಾಶವು ಸಹ ಸುರಿಸಿತು. ಮೇಘಗಳು ಸಹ ನೀರು ಸುರಿಸಿದವು.