Judges 5:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದೆಬೋರಳೇ, ನೀನು ಬರುವವರೆಗೆ, ನೀನು ಇಸ್ರೇಲರಿಗೆ ತಾಯಿಯಾಗಿ ಬರುವವರೆಗೆ, ಶೂರರೇ ಇರಲಿಲ್ಲ. ಇಸ್ರೇಲಿನಲ್ಲಿ ವೀರರೇ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೆಬೋರಳಾದ ನಾನು ಇಸ್ರಾಯೇಲರಲ್ಲಿ ತಾಯಿಯಂತೆ ಎದ್ದುಬರುವವರೆಗೆ ಇಸ್ರಾಯೇಲ್ ಗ್ರಾಮಗಳು ಹಾಳುಬಿದ್ದಿದ್ದವು.
Kannada BSI Bible 2016
ದೆಬೋರಳಾದ ನಾನು ಏಳುವ ಮಟ್ಟಿಗೂ ಇಸ್ರಾಯೇಲಿನಲ್ಲಿ ತಾಯಾಗಿ ನಾನು ಏಳುವ ಮಟ್ಟಿಗೂ ಹಳ್ಳಿಗಳ ನಿವಾಸಿಗಳು ನಿಂತುಹೋದರು; ಇಸ್ರಾಯೇಲಿನಲ್ಲಿ ನಿಂತುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೆಬೋರಳಾದ ನಾನು ಇಸ್ರಾಯೇಲ್ಯರಲ್ಲಿ ತಾಯಿಯಂತೆ ಎದ್ದು ಬರುವವರೆಗೆ ಇಸ್ರಾಯೇಲ್‍ಗ್ರಾಮಗಳು ಹಾಳು ಬಿದ್ದಿದ್ದವು.
Kannada Bible (KNCL) BSI 2016
ದೆಬೋರಾ, ಇಸ್ರಯೇಲರ ತಾಯಿಯಂತೆ ನೀ ಬರುವ ಮುನ್ನ ಪಾಳುಬಿದ್ದಿದ್ದವು ಇಸ್ರಯೇಲ ಗ್ರಾಮಗಳೆಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೆಬೋರಳಾದ ನಾನು ಏಳುವವರೆಗೂ, ಇಸ್ರಾಯೇಲಿನಲ್ಲಿ ತಾಯಿಯಾಗಿ ನಾನು ಏಳುವವರೆಗೂ ಇಸ್ರಾಯೇಲಿನ ಹಳ್ಳಿಗಳ ನಿವಾಸಿಗಳು ಯುದ್ಧಮಾಡಲಿಲ್ಲ.