Judges 6:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ನಿಮಗೆ, ‘ಯೆಹೋವನಾದ ನಾನೇ ನಿಮ್ಮ ದೇವರು! ಅಮೋರಿಯರ ಪ್ರದೇಶದಲ್ಲಿದ್ದರೂ ಅವರ ಸುಳ್ಳುದೇವರುಗಳನ್ನು ನೀವು ಪೂಜಿಸಕೂಡದು ಎಂದು ಹೇಳಿದ್ದೆ.’ ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ.”8
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ, ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುತ್ತಿದ್ದಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಆಜ್ಞಾಪಿಸಿದ್ದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’” ಅಂದನು.
Kannada BSI Bible 2016
ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು.
Kannada Bible (KNCL) BSI 2016
ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯೆ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆ. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಾನೇ ನಿಮ್ಮ ದೇವರಾದ ಯೆಹೋವ ದೇವರು. ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡಬೇಡಿರಿ,’ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಸ್ವರವನ್ನು ಕೇಳದೆ ಹೋದಿರಿ,” ಎಂದು ಹೇಳಿದನು.