Judges 6:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮ ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.
Kannada BSI Bible 2016
ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಗಿದ್ಯೋನನು ಅವನಿಗೆ - ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ವಿುದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ ಅನ್ನಲು
Kannada Bible (KNCL) BSI 2016
ಆಗ ಗಿದ್ಯೋನನು ಅವನಿಗೆ, “ಸ್ವಾಮೀ, ಸರ್ವೇಶ್ವರ ನನ್ನೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಭುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ,” ಎನ್ನಲು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಗಿದ್ಯೋನನು ಅವನಿಗೆ, “ಒಡೆಯನೇ, ಕ್ಷಮಿಸಿರಿ, ಯೆಹೋವ ದೇವರು ನಮ್ಮ ಸಂಗಡ ಇದ್ದರೆ, ಇದೆಲ್ಲಾ ನಮಗೆ ಏಕೆ ಸಂಭವಿಸಿತು? ಯೆಹೋವ ದೇವರು ನಮ್ಮನ್ನು ಈಜಿಪ್ಟಿನಿಂದ ಬರಮಾಡಲಿಲ್ಲವೋ? ಎಂದು ನಮ್ಮ ಪಿತೃಗಳು ನಮಗೆ ವಿವರಿಸಿ ಹೇಳಿದಂಥ ಅದ್ಭುತಗಳು ಎಲ್ಲಿ? ಈಗ ಯೆಹೋವ ದೇವರು ನಮ್ಮನ್ನು ಕೈಬಿಟ್ಟು, ಮಿದ್ಯಾನ್ಯರ ಕೈಗೆ ನಮ್ಮನ್ನು ಒಪ್ಪಿಸಿದ್ದಾರೆ,” ಎಂದನು.