Judges 6:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಗಿದ್ಯೋನನಿಗೆ, “ನಾನು ನಿನ್ನ ಸಂಗಡವಿದ್ದೇನೆ! ಆದ್ದರಿಂದ ನೀನು ಮಿದ್ಯಾನ್ಯರನ್ನು ಸೋಲಿಸುವೆ. ಕೇವಲ ಒಬ್ಬನೊಂದಿಗೆ ಯುದ್ಧ ಮಾಡುತ್ತಿರುವಿಯೋ ಎಂಬಂತೆ ನಿನಗೆ ಅನಿಸುತ್ತದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅವನಿಗೆ, “ನಾನು ನಿನ್ನ ಸಂಗಡ ಇರುವುದರಿಂದ ನೀನು ಮಿದ್ಯಾನ್ಯರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ” ಅಂದನು.
Kannada BSI Bible 2016
ಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅವನಿಗೆ - ನಾನು ನಿನ್ನ ಸಂಗಡ ಇರುವದರಿಂದ ನೀನು ವಿುದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ ಅಂದನು.
Kannada Bible (KNCL) BSI 2016
ಸರ್ವೇಶ್ವರ ಅವನಿಗೆ, “ನಾನು ನಿನ್ನೊಂದಿಗೆ ಇರುವುದರಿಂದ ನೀನು ಮಿದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸದೆಬಡಿಯುವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರು ಅವನಿಗೆ, “ನಾನು ನಿನ್ನ ಸಂಗಡ ಖಂಡಿತವಾಗಿ ಇರುವುದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ,” ಎಂದರು.