Judges 6:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಯವಿಟ್ಟು ಇಲ್ಲಿಯೇ ಇರು. ನಾನು ಬರುವವರೆಗೆ ಎಲ್ಲಿಗೂ ಹೋಗಬೇಡ. ನಾನು ನಿನಗೆ ಕಾಣಿಕೆಯನ್ನು ತಂದು ಅರ್ಪಿಸುವುದಕ್ಕೆ ಅವಕಾಶಕೊಡು” ಎಂದು ಪ್ರಾರ್ಥಿಸಿದನು. ಅದಕ್ಕೆ, ಆತನು, “ನೀನು ಬರುವವರೆಗೂ ನಾನು ಇರುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವ ವರೆಗೆ ತಾವು ಈ ಸ್ಥಳವನ್ನು ಬಿಡಬಾರದು” ಎಂದು ಬಿನ್ನವಿಸಲು ಆತನು, “ನೀನು ತಿರುಗಿ ಬರುವ ವರೆಗೆ ನಾನು ಇಲ್ಲೇ ಇರುವೆನು” ಅಂದನು.
Kannada BSI Bible 2016
ನಾನು ನಿನ್ನ ಬಳಿಗೆ ನನ್ನ ಕಾಣಿಕೆಯನ್ನು ತಂದು ನಿನ್ನ ಮುಂದೆ ಇಡುವ ವರೆಗೆ ನೀನು ಈ ಸ್ಥಳವನ್ನು ಬಿಟ್ಟುಹೋಗ ಬಾರದು ಎಂದು ಬೇಡಿಕೊಂಡನು. ಅದಕ್ಕೆ ಆತನುನೀನು ತಿರುಗಿ ಬರುವತನಕ ನಾನು ಕಾದಿರುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವವರೆಗೆ ತಾವು ಈ ಸ್ಥಳವನ್ನು ಬಿಡಬಾರದು ಎಂದು ಬಿನ್ನವಿಸಲು ಆತನು - ನೀನು ತಿರಿಗಿ ಬರುವವರೆಗೆ ನಾನು ಇಲ್ಲೇ ಇರುವೆನು ಅಂದನು.
Kannada Bible (KNCL) BSI 2016
ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವವರೆಗೆ ತಾವು ಈ ಸ್ಥಳವನ್ನು ಬಿಡಬಾರದು,” ಎಂದು ಬಿನ್ನವಿಸಲು ಅವರು, “ನೀನು ತಿರುಗಿ ಬರುವವರೆಗೆ ನಾನು ಇಲ್ಲೇ ಇರುವೆನು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮ ಬಳಿಗೆ ನನ್ನ ಕಾಣಿಕೆಯನ್ನು ತಂದು, ನಿಮ್ಮ ಮುಂದೆ ಇಡುವವರೆಗೆ ನೀವು ಈ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದು ಬೇಡಿಕೊಂಡನು. ಅದಕ್ಕೆ ಯೆಹೋವ ದೇವರು, “ನೀನು ತಿರುಗಿ ಬರುವ ತನಕ ನಾನು ಕಾದಿರುವೆನು,” ಎಂದರು.