Judges 6:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಾನು ಈವರೆಗೆ ಮಾತಾಡುತ್ತಿದ್ದದ್ದು ಯೆಹೋವನ ದೂತನೊಡನೆ ಎಂಬುದು ಗಿದ್ಯೋನನಿಗೆ ಆಗ ಅರಿವಾಯಿತು. ಗಿದ್ಯೋನನು, “ಸರ್ವಶಕ್ತನಾದ ಯೆಹೋವನೇ, ನಿನ್ನ ದೂತನನ್ನು ಮುಖಾಮುಖಿಯಾಗಿ ಕಂಡೆನು” ಎಂದು ಕೂಗಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.
Kannada BSI Bible 2016
ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಓ ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು - ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ ಎಂದು ಕೂಗಿದನು.
Kannada Bible (KNCL) BSI 2016
ಆತನು ಸರ್ವೇಶ್ವರನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಸ್ವಾಮಿ, ಸರ್ವೇಶ್ವರಾ, ಸರ್ವೇಶ್ವರನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆಹೋವ ದೇವರ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋನನು, “ಸಾರ್ವಭೌಮ ಯೆಹೋವ ದೇವರೇ, ನಾನು ಯೆಹೋವ ದೇವರ ದೂತನನ್ನು ಮುಖಾಮುಖಿಯಾಗಿ ಕಂಡೆನು,” ಎಂದನು.